ಮನೆ ಸುದ್ದಿ ಜಾಲ ದೆಹಲಿಯಲ್ಲಿ ಇಂದು CWC ಸಭೆ – ಸಿಎಂ ಭಾಗಿ, ಅಧಿಕಾರದ ಗೊಂದಲ ಬಗೆಹರಿಯುತ್ತಾ..?

ದೆಹಲಿಯಲ್ಲಿ ಇಂದು CWC ಸಭೆ – ಸಿಎಂ ಭಾಗಿ, ಅಧಿಕಾರದ ಗೊಂದಲ ಬಗೆಹರಿಯುತ್ತಾ..?

0

ನವದೆಹಲಿ : ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದ್ದು, ಮುಂಬರುವ ಪಂಚ ರಾಜ್ಯಗಳ ಚುನಾವಣೆ, ವೋಟ್ ಚೋರಿ, ನ್ಯಾಷನಲ್ ಹೆರಾಲ್ಡ್, ಇತರೆ ವಿಚಾರಗಳ ಬಗ್ಗೆ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಅಲ್ಲದೇ ದೇಶಾದ್ಯಾಂತ ಹೋರಾಟ ರೂಪಿಸುವ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ಈ ಸಭೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ. ಕಾರ್ಯಕಾರಿ ಸಭೆಯಲ್ಲಿ ಭಾಗಿಯಾದ ಬಳಿಕ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪ್ರತ್ಯೇಕ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.