ನವದೆಹಲಿ: ತಮಿಳುನಾಡಿಗೆ ಮತ್ತೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್ ಸಿ) ಸೂಚಿಸಿದೆ.
ಡಿಸೆಂಬರ್ ಅಂತ್ಯದವರೆಗೆ 3,128 ಕ್ಯೂಸೆಕ್ ನೀರು ಹರಿಸಬೇಕು. ಹಾಗೇ ಜನವರಿಯಲ್ಲಿ 1,030 ಕ್ಯೂಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಮಳೆ ಕೊರತೆಯಿಂದ ತೀವ್ರ ಬರಲಾಗ ಆವರಿಸಿದೆ. ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಇಷ್ಟಾದರೂ ಸಹ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದ್ದು, ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.