ಮನೆ ರಾಜ್ಯ ಫೆಬ್ರವರಿಯಲ್ಲಿ ತಮಿಳುನಾಡಿಗೆ 998 ಕ್ಯೂಸೆಕ್​​ ನೀರು ಬಿಡುಗಡೆ ಮಾಡಲು ರಾಜ್ಯಕ್ಕೆ ಸಿಡಬ್ಲ್ಯುಆರ್​ ಸಿ

ಫೆಬ್ರವರಿಯಲ್ಲಿ ತಮಿಳುನಾಡಿಗೆ 998 ಕ್ಯೂಸೆಕ್​​ ನೀರು ಬಿಡುಗಡೆ ಮಾಡಲು ರಾಜ್ಯಕ್ಕೆ ಸಿಡಬ್ಲ್ಯುಆರ್​ ಸಿ

0

ನವದೆಹಲಿ: ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್​​ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್​​ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್​ ಸಿ ಗುರುವಾರ ಆದೇಶ ನೀಡಿದೆ.

ಸಿಡಬ್ಲ್ಯುಆರ್ ​ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು.

19 ಟಿಎಂಸಿಎಫ್ ​ಟಿ ಹಾಗೂ ಜನವರಿ 19ರ ವರೆಗೆ ಬಾಕಿ ಇರಿಸಿಕೊಂಡಿರುವ 7.61 ಟಿಎಂಸಿಎಫ್​ಟಿ ನೀರನ್ನು ಮೇ ತಿಂಗಳ ಒಳಗೆ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಸಭೆಯಲ್ಲಿ ತಮಿಳುನಾಡು ಸರ್ಕಾರ ಮನವಿ ಮಾಡಿದೆ.

ತಮಿಳುನಾಡಿನ ಬೇಡಿಕೆಯನ್ನು ಒಪ್ಪಲಾಗದು ಎಂದು ವಾದ ಮಂಡಿಸಿದ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ತಿಳಿಸಿತು.

ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುವವರೆಗೆ ಕುಡಿಯುವ ನೀರು ಮತ್ತು ನೀರಾವರಿಯ ಬೇಡಿಕೆಯನ್ನು ಪೂರೈಸಲು ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ಲಭ್ಯವಿರುವ ನೀರು ಅತೀ ಅಗತ್ಯ ಎಂದು ಕರ್ನಾಟಕ ವಾದಿಸಿದೆ.