ಚೆನ್ನೈ(Chennai): ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ತಮಿಳುನಾಡಿನ ವಿವಿಧೆಡೆ ಭಾರಿ ಮಳೆ ಸುರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡಿನ ಚೆಂಗಲ್‌ಪಟ್ಟು, ವಿಲ್ಲುಪುರಂ ಮತ್ತು ಕಂಚೀಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಡ್ ಘೋಷಿಸಲಾಗಿದೆ.
ಭಾರಿ ಮಳೆ ಸುರಿಯುವ ಹಾಗೂ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾರೈಕಲ್’ನಿಂದ ಪೂರ್ವ ಆಗ್ನೇಯಕ್ಕೆ 270 ಕಿ.ಮೀ. ದೂರದಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ. ಈ ವೇಳೆ ಗಂಟೆಗೆ 65ರಿಂದ 76 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್’ಡಿಆರ್’ಎಫ್) ನಿಯೋಜಿಸಲಾಗಿದೆ.