ಮನೆ ರಾಜಕೀಯ ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್ ಮತ್ತಿತರ ಮುಖಂಡರ ಭೇಟಿ

ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್ ಮತ್ತಿತರ ಮುಖಂಡರ ಭೇಟಿ

0

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಎರಡನೇ ಹಂತದ ಹೋರಾಟ ಇದೇ 27ರಂದು ರಾಮನಗರದಲ್ಲಿ ಆರಂಭವಾಗಿ ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರ ಜತೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶನಿವಾರ ಭೇಟಿ ನೀಡಿ ಸಮಾವೇಶ ನಡೆಯುವ ಜಾಗ ಪರಿಶೀಲಿಸಿದರು.

ಈ ಸಮಾವೇಶಕ್ಕೆ ಆಗಮಿಸುವವರ ಪ್ರಯಾಣದ ಅನುಕೂಲಕ್ಕಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಹೊಂದಿಕೊಂಡಿರುವ ಮೆಟ್ರೋ ರೈಲು ನಿಲ್ದಾಣದಿಂದ ಮೆಜೆಸ್ಟಿಕ್ ನಿಲ್ದಾಣದವರೆಗೆ ಕಾಂಗ್ರೆಸ್ ನಾಯಕರುಗಳು ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಿದರು.

ಸಮಾವೇಶದ ಸಮಯದಲ್ಲಿ ಅಧಿಕ ವಾಹನ ದಟ್ಟಣೆ ನಿಯಂತ್ರಿಸಲು ಸಮಾವೇಶದಲ್ಲಿ ಭಾಗವಹಿಸುವವರು ಮೆಟ್ರೋ ಮಾರ್ಗವಾಗಿ ಪ್ರಯಾಣ ಮಾಡಬೇಕು ಎಂದು ನಾಯಕರು ಮನವಿ ಮಾಡಿದರು. ಆ ಮೂಲಕ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸುವ ಇಂಗಿತ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅನೇಕ ಜನರು ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೇಕೆದಾಟು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದರು.

ಹಿಂದಿನ ಲೇಖನಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ದೇಶಕ್ಕೆ ಮರಳುವ ವಿಶ್ವಾಸ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಭೀಕರ ದಾಳಿ: ನಾಗರಿಕರ ಜೀವ ಉಳಿಸಲು ಖೇರ್ಸನ್ ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೇನೆ