ರಾಮನಗರ: ಸಂಸದ ಡಿಕೆ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಪುರ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿದ್ದರು. ಇದೀಗ ಇಂದು(ಏಪ್ರಿಲ್ 20) ಡಿಕೆ ಸುರೇಶ್ ಸಹ ನಾಮಪತ್ರ ಸಲ್ಲಿಸಿದ್ದಾರೆ.
ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಪ್ರತಿನಿಧಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಅವರು ಮೊನ್ನೇ ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು. ಆದ್ರೆ, ಇಂದು ಅವರ ಸಹೋದರ ಡಿಕೆ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಅಚ್ಚರಿಗೆ ಕಾರಣವಾಗಿದೆ.
ಡಿ.ಕೆ ಶಿವಕುಮಾರ್ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಡಿಕೆ ಸುರೇಶ್ ಸಹ ಇಂದು ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್’ಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.