ದರ್ಶನ್ ನಟನೆಯ ಕಾಟೇರ ಸಿನಿಮಾ ಈಗ ಒಟಿಟಿಗೆ ಬರಲು ದಿನಾಂಕ ನಿಗದಿಯಾಗಿದೆ. ಫೆ.9ರಂದು ಜೀ5ನಲ್ಲಿ ಪ್ರಸಾರವಾಗಲಿದೆ.
ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. “ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು ಸಿನಿಮಾ ಪ್ರೀಮಿಯರ್ ಆಗಲಿದೆ.
ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಕಾಟೇರ ರಾಜ್ಯದ 196 ಚಿತ್ರಮಂದಿರಗಳಲ್ಲಿ ಭರ್ಜರಿ ಓಟ ಮುಂದುವರಿಸಿದೆ. ಈ ಬೆನ್ನಲ್ಲೆ ಒಟಿಟಿ ಆಗಮನಕ್ಕೂ ದಿನಾಂಕ ನಿಗದಿಯಾಗಿದೆ.















