ಮನೆ ಕಾನೂನು ಆಗಸ್ಟ್ 1ರ ತನಕ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ

ಆಗಸ್ಟ್ 1ರ ತನಕ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ

0

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ನ್ಯಾಯಾಂಗ ಬಂಧನವನ್ನು ಇಂದು (ಜುಲೈ 18) ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

Join Our Whatsapp Group

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್​ ಮೂಲಕ ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್​ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.

ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ.

ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ನ್ಯಾಯಾಧೀಶ ವಿಶ್ವನಾಥ‌ ಸಿ. ಗೌಡರ್ ಅವರು ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಅದೇಶಿಸಿದ್ದಾರೆ.