ಮನೆ ರಾಷ್ಟ್ರೀಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ: ಒಂದೇ ಹಂತದಲ್ಲಿ ಚುನಾವಣೆ

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ: ಒಂದೇ ಹಂತದಲ್ಲಿ ಚುನಾವಣೆ

0

ನವದೆಹಲಿ(Newdelhi): ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದ್ದು, ನ.12ಕ್ಕೆ ಚುನಾವಣೆ ನಡೆಯಲಿದೆ ಎಂದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಇದೇ 17ರಂದು ಅಧಿಸೂಚನೆ ಜಾರಿಗೆ ಬರಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 25ರಂದು ಕಡೆಯ ದಿನ ಅ. 27ರಂದು ನಾಮಪತ್ರಗಳ ಪರಿಶೀಲನೆ ಅ.29ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ.

ಯಾವುದೇ ತೊಡಕಿಲ್ಲದೆ ಚುನಾವಣೆ ಆಯೋಜನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

ಹಿಂದಿನ ಲೇಖನಇಂದಿಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಡೆಯುತ್ತಿರುವುದು ವಿಷಾಧನೀಯ: ಕಮಲಾ
ಮುಂದಿನ ಲೇಖನಒಣ ಶುಂಠಿ ನಮ್ಮ ಆರೋಗ್ಯದ ಬಂಧು