ಬೆಂಗಳೂರು : ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ ಆಗಿದೆ. ಮುಂದಿನ ತಿಂಗಳು ನವೆಂಬರ್ 17 ಮತ್ತು 18 ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ.
ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ತನ್ನದೇ ಆದ ವಿಶೇಷ ಇತಿಹಾಸ ಇದೆ. ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆ ಆಗದಂತೆ ಅದ್ಧೂರಿ ಆಗಿ ನಡೆಸಲು ನಿರ್ಧರಿಸಲಾಗಿದೆ.
ಇದೇ ಗುರುವಾರ ಕಡಲೆ ಕಾಯಿ ಪರಿಷೆ ಸಂಬಂಧ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ಕೂಡ ನಡೆಯಲಿದ್ದು, ಈ ಸಭೆಯಲ್ಲಿ ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ.
ಜೊತೆಗೆ ವ್ಯಾಪಾರಿಗಳಿಂದ ಯಾವುದೇ ಸುಂಕ ವಸೂಲಾತಿ ಯಾರು ಮಾಡಬಾರದು ಎಂಬುದುನ್ನ ನಿರ್ಧಾರ ಕೈಗೊಳ್ಳುವುದರ ಜೊತೆಗೆ ಏನೆಲ್ಲ ವಿಶೇಷತೆ ಇರುತ್ತೆ ಎಂಬುದನ್ನು ಬಹಿರಂಗ ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.















