ಮನೆ Breaking News ಪಂಚರಾಜ್ಯ ಚುನಾವಣೆಗೆ ದಿನಾಂಕ ನಿಗದಿ: ಛತ್ತೀಸ್ ಘಡದಲ್ಲಿ 2 ಹಂತ, ಉಳಿದ 4 ರಾಜ್ಯಗಳಲ್ಲಿ ಒಂದೇ...

ಪಂಚರಾಜ್ಯ ಚುನಾವಣೆಗೆ ದಿನಾಂಕ ನಿಗದಿ: ಛತ್ತೀಸ್ ಘಡದಲ್ಲಿ 2 ಹಂತ, ಉಳಿದ 4 ರಾಜ್ಯಗಳಲ್ಲಿ ಒಂದೇ ಹಂತದ ಮತದಾನ, ಡಿಸೆಂಬರ್ 3ರಂದು ಫಲಿತಾಂಶ

0

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7ರಂದು ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಮತದಾನ ನಡೆಯಲಿದೆ.

ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆಯು ಡಿಸೆಂಬರ್ 3ರಂದು ನಡೆಯಲಿದೆ.

ಮುಂಬರುವ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ), ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳಿಗೆ ಪ್ರಮುಖ ಪರೀಕ್ಷೆಯಾಗಿದೆ.

ಐದು ರಾಜ್ಯಗಳ ಪೈಕಿ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. (ರಾಜಸ್ಥಾನ ಮತ್ತು ಛತ್ತೀಸ್‌ ಗಢ) ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಅಧಿಕಾರದಲ್ಲಿದೆ ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ ಎಫ್) ಅಧಿಕಾರದಲ್ಲಿದೆ.