ಮನೆ ಸುದ್ದಿ ಜಾಲ ಡಿವೈಡರ್’ಗೆ ಕಾರು ಡಿಕ್ಕಿ, 7 ಮಂದಿ ದುರ್ಮರಣ

ಡಿವೈಡರ್’ಗೆ ಕಾರು ಡಿಕ್ಕಿ, 7 ಮಂದಿ ದುರ್ಮರಣ

0

ದಾವಣಗೆರೆ: ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರು ಶಹಾಪುರದವರಾಗಿದ್ದು, ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮೃತರ ಕುರಿತು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಸಿ.ಬಿ.ರೈಷ್ಯಂತ್ ಮತ್ತು ಅವರ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಕೊರೋನಾ: ಇಂದು 2.64 ಲಕ್ಷ ಹೊಸ ಪತ್ತೆ
ಮುಂದಿನ ಲೇಖನಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತಮಹೋತ್ಸವ: ವಿದ್ಯಾರ್ಥಿಗಳಿಂದ ಸೂರ್ಯನಮಸ್ಕಾರ