ದಾವಣಗೆರೆ: ಜಾಲಿ ರೈಡ್’ಗೆ ಬಂದಿದ್ದ ಕೇರಳದ ಇಬ್ಬರು ಬೈಕ್ ಸವಾರರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ ನಡೆದಿದೆ.
ಕೇರಳ ಮೂಲದ ಅತುಲ್(25), ಋಷಿಕೇಶ್(24) ಮೃತ ದುರ್ದೈವಿಗಳು. ಎನ್ ಫೀಲ್ಡ್ ಹಿಮಾಲಯನ್ ಬೈಕ್ ನಲ್ಲಿ ಕೇರಳದಿಂದ ಬಂದಿದ್ದ ಯುವಕರು ದಾವಣಗೆರೆಯ ಎಸ್.ಎಸ್. ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಬ್ರಿಡ್ಜ್ ಬಳಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬ್ರಿಡ್ಜ್ ಮೇಲಿಂದ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಾರು ಹರಿದು ಇಬ್ಬರು ಬೈಕ್ ಸವಾರರ ಸಾವಾಗಿದೆ. ಇನ್ನು ರಸ್ತೆಯ ಮಧ್ಯೆ ಬಿದ್ದ ಬೈಕ್ ಗೆ ಕಾರು ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸ್ಥಳಕ್ಕೆ ಎಸ್ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.