ಮನೆ ಅಪರಾಧ ದಾವಣಗೆರೆ: ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ಚಾಕುವಿನಿಂದ ಇರಿದು ಯುವಕನ ಕೊಲೆ

0

ದಾವಣಗೆರೆ: ತಾಲೂಕಿನ ಓಬಜ್ಜಿಹ‌ಳ್ಳಿ ಬಳಿ ಬುಧವಾರ ರಾತ್ರಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

Join Our Whatsapp Group

ದಾವಣಗೆರೆ ನಗರದ ಬೂದಾಳ್ ರಸ್ತೆಯ ನಿವಾಸಿ ಸಂದೀಪ್ (25 ವ) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಕೊಲೆಯಾದ ಸಂದೀಪ್ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ.

ಬುಧವಾರ ರಾತ್ರಿ ಪಾರ್ಟಿ ಮಾಡಲು ಹೋಗಿದ್ದರು ಎನ್ನಲಾಗುತ್ತಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ದಾವಣಗೆರೆ ಗ್ರಾಮಾಂತರ ಠಾಣೆ ಸಿಪಿಐ ಕಿರಣ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಪರಿಶೀಲನೆ ನಡೆಸಿದರು.

ಅರೋಪಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ.

ಹಿಂದಿನ ಲೇಖನಜೂನ್‌ 4ರಂದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಅರವಿಂದ ಕೇಜ್ರಿವಾಲ್ ವಿಶ್ವಾಸ
ಮುಂದಿನ ಲೇಖನಬಿಜೆಡಿ- ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ- ಓರ್ವ ಸಾವು, 7 ಮಂದಿಗೆ ಗಾಯ