ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಈಗಿದ್ದ ಬೆಂಗಳೂರು ಪೊಲೀಸ ಕಮಿಷನರ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ರಾಜ್ಯ ಸರ್ಕಾರ ಆದೇಶಿಸಿದೆ.
ಎಡಿಜಿಪಿ ಮತ್ತು ನಗರ ಟ್ರಾಫಿಕ್ ವಿಶೇಷ ಆಯುಕ್ತರಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ಬೆಂಗಳೂರು ಅಪರಾಧ ತನಿಖೆ ವಿಭಾಗ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಯಾಗಿ ವರ್ಗಾವಣೆ ಮಾಡಿ ನೇಮಿಸಲಾಗಿದೆ.
ಬೆಂಗಳೂರು ಅಪರಾಧ ತನಿಖೆ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ ಶರತ್ ಚಂದ್ರ ಅವರನ್ನು ಇಂಟಲಿಜೆನ್ಸ್ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.














