ಮನೆ ಸುದ್ದಿ ಜಾಲ ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಮಟ್ಟ ದಾಟಿರುವ ಕೊರೊನಾ: ಡಿಸಿ

ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಮಟ್ಟ ದಾಟಿರುವ ಕೊರೊನಾ: ಡಿಸಿ

0

ಮೈಸೂರು:  ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೋನಾ ಸೋಂಕು ಗರಿಷ್ಠ ಮಟ್ಟ ದಾಟಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಬಗಾದಿ ಗೌತಮ್, ಜಿಲ್ಲೆಯಲ್ಲಿ ಸೋಂಕು  ಗರಿಷ್ಠ ಮಟ್ಟ ದಾಟಿದೆ. ಬಾಕಿ ಉಳಿದಿದ್ದ ಕೊರೋನಾ ಪರೀಕ್ಷಾ ವರದಿಯನ್ನು ಕಳೆದ ಮೂರು ದಿನಗಳಲ್ಲಿ ನೀಡಲಾಗಿದೆ. ಹಾಗಾಗಿ ಮೂರು ದಿನಗಳಿಂದ ಹೆಚ್ಚಿನ ಮಟ್ಟದ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಆದರೆ ಇಂದಿನಿಂದ ಆಯಾ ದಿನಗಳ ಪಾಸಿಟಿವ್ ವರದಿಗಳನ್ನ ನೀಡಲಾಗುವುದು ಎಂದು ತಿಳಿಸಿದರು.

ಶಾಲೆಗಳಿಗೆ ರಜೆ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಆದೇಶ ಆಗಿದೆ. ಈ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಕಮಿಟಿ ರಚಿಸಲಾಗಿದೆ. ಈ ಕಮಿಟಿಯು ಶಾಲೆಯಲ್ಲಿ ಕಂಡು ಬರುವ ಕೇಸ್ ಗಳನ್ನ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಕಮಿಟಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇರುತ್ತಾರೆ. ಈ ಹಿಂದೆ ಜಿಲ್ಲೆಯ ಶಾಲೆಗಳಿಗೆ ರಜೆ ನೀಡುವ ಅಧಿಕಾರ ಜಿಲ್ಲಾಧಿಕಾರಿಗೆ ನೀಡಲಾಗಿತ್ತು. ಆದರೆ ಈಗ ಆ ಬಗ್ಗೆ ಕಮಿಟಿ ನಿರ್ಧಾರ ಮಾಡುತ್ತೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾಹಿತಿ ನೀಡಿದರು.

ಹಿಂದಿನ ಲೇಖನಸೆಕ್ಸ್ ನಂತರ ಈ ಅಭ್ಯಾಸಗಳು ಬಾಂಧವ್ಯವನ್ನು ಮತ್ತಷ್ಟು ಗಟ್ಟಿಯಾಗಿಸುತ್ತದೆ
ಮುಂದಿನ ಲೇಖನಗರ್ಭಿಣಿಯಾಗಿದ್ದಾಗ ಸೆಕ್ಸ್ ಸುರಕ್ಷಿತವೇ? ನಿಮ್ಮ ಪ್ರಶ್ನೆಗಳಿಗೆ ಉತ್ತರ