ಮನೆ ರಾಜ್ಯ ಹಾಸನಾಂಬೆ ದೇವಿ ದರ್ಶನ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್

ಹಾಸನಾಂಬೆ ದೇವಿ ದರ್ಶನ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್

0

ಹಾಸನ: ಉಪ ಚುನಾವಣೆಯ ಬ್ಯುಸಿ ನಡುವೆಯೂ ಶುಕ್ರವಾರ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದರು.

Join Our Whatsapp Group

ದೇವಿ ದರ್ಶನದ ಬಳಿಕ ಮಾತನಾಡಿದ ಅವರು, ಶುಭ ಶುಕ್ರವಾರ ತಾಯಿ ಹಾಸನಾಂಬೆ ದರ್ಶನಕ್ಕೆ ನಾನು ನನ್ನ ಕುಟುಂಬ ಸಮೇತ ಆಗಮಿಸಿರುವೆ. ಕಣ್ತುಂಬ ದೇವಿಯ ದರ್ಶನವಾಯಿತು. ಈ ಬಾರಿ ಒಳ್ಳೆಯ ಮಳೆ ಬಂದು ಶಾಂತಿ, ನೆಮ್ಮದಿಯನ್ನು ತಾಯಿ ಕರುಣಿಸಿದ್ದಾಳೆ. ಮೈಸೂರು ದಸರಾವನ್ನೂ ಈ ಬಾರಿ ಬಹಳ ವಿಜೃಂಭಣೆಯಿಂದ ಮಾಡಿದ್ದೇವೆ. ಅಂತೆಯೇ ಹಾಸನದಲ್ಲೂ ಉತ್ತಮವಾಗಿ ಹಾಸನಾಂಬೆ ದೇವಿ ಉತ್ಸವ ಹಿನ್ನೆಲೆಯಲ್ಲಿ ಆಕರ್ಷಕ ರೀತಿಯಲ್ಲಿ ಅಲಂಕಾರ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಯಿ ರಾಜ್ಯದ ಜನತೆಗೆ ನೆಮ್ಮದಿ, ಸುಖ, ಶಾಂತಿ ಕೊಡಲೆಂದು ಸರ್ಕಾರದಿಂದ ಪ್ರಾರ್ಥನೆ ಮಾಡಿದ್ದೇನೆ. ಹಿಂದೆಯೂ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದೆ. ಹಾಗೆಯೇ ಇವತ್ತೂ ಕೂಡ ಬಂದಿದ್ದೇನೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಐಶ್ವರ್ಯ, ವ್ಯವಸಾಯ – ವ್ಯಾಪಾರದಲ್ಲಿ ಸಮೃದ್ಧಿ ಕೊಡಲಿ. 3 ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಈಗ ಮಾತನಾಡಲ್ಲ ಎಂದು ಹೇಳಿದರು.

ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು, ನೂತನ ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಎಸ್ಪಿ ಮಹಮದ್ ಸುಜೀತಾ ಮೊದಲಾದವರು ಛತ್ರಿ – ಚಾಮರ, ಕೊಂಬು-ಕಹಳೆ, ಮಂಗಳವಾದ್ಯ ಹಾಗೂ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು. ಮಾಜಿ ಎಂಎಲ್ಸಿ ಎಂ.ಎ. ಗೋಪಾಲಸ್ವಾಮಿ ಸೇರಿದಂತೆ ಕಾಂಗ್ರೆಸ್​ನ ಹಲವು ಮುಖಂಡರು ಈ ವೇಳೆ ಹಾಜರಿದ್ದರು.