ಮನೆ ರಾಷ್ಟ್ರೀಯ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ – ಡಿಸಿಎಂ ಡಿಕೆಶಿ

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ – ಡಿಸಿಎಂ ಡಿಕೆಶಿ

0

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡುವ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಇಂದು (ಸೋಮವಾರ) ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.

ಪೊಲೀಸರು ನೀಡಿರುವ ನೋಟಿಸ್‌ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್‌ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇಡಿ ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್‌ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್‌ಐಆರ್ ಪ್ರತಿ ನೀಡಿ ಎಂದು ಕೇಳುತ್ತೇನೆ ಎಂದರು.

ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ಭಾನುವಾರ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ ಎಂದು ತಿಳಿಸಿದರು.

ಇಂದು ವೈಯಕ್ತಿಕವಾಗಿ ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು. ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಭೇಟಿ ಬಗ್ಗೆ ಮಾತನಾಡಿ, ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.