ಬೆಂಗಳೂರು: ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ 21 ವರ್ಷದ ಯುವತಿಯ ಶವ ಪತ್ತೆಯಾಗಿದೆ.
ನಿನ್ನೆ(ಮೇ 15) ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾಳ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.
ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳಲ್ಲ. ವ್ಯವಸ್ಥೆಯೇ ನನ್ನ ಮಗಳ ಸಾವಿಗೆ ಕಾರಣವಾಗಿರಬೇಕು. ಪ್ರತಿದಿನ ಕಾಲೇಜಿನಿಂದ ಮನೆಗೆ ಬಂದ ಕೂಡಲೇ ಸೇಫ್ ಆಗಿ ತಲುಪಿದ್ದಕ್ಕೆ ಮೇಸೆಜ್ ಮಾಡುತ್ತಿದ್ದಳು. ಎಜುಕೇಷನ್ ಸಿಸ್ಟಮ್ ಪ್ರಶ್ನೆ ಮಾಡ್ತಿದ್ದಳು. ಮನೆಯ ಹಿಂಬದಿ ಡೋರ್ ಓಪನ್ ಆಗಿದೆ, ನನ್ನ ಮಗಳ ಮೊಬೈಲ್ ಕಳೆದು ಹೋಗಿದೆ. ನನ್ನ ಮಗಳನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಪ್ರಕರಣದ ಬಗ್ಗೆ ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಪ್ರತಿಕ್ರಿಯಿಸಿದ್ದು, ನಿನ್ನೆ (ಮೇ 15) ಸಂಜೆ 7:30 ರ ಸುಮಾರಿಗೆ ಘಟನೆ ವರದಿಯಾಗಿದೆ. 21 ವರ್ಷದ ವಿದ್ಯಾರ್ಥಿಯ ಕೈ ಹಾಗೂ ಕುತ್ತಿಗೆಗೆ ಚಾಕು ಇರಿತ ಆಗಿದೆ. ಮನೆಯ ಬಾತ್ ರೂಂನಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯಾ ಅನ್ನೋದು ತನಿಖೆ ನಡೆಯುತ್ತಿದೆ. ಮನೆಯವರು ಸಾವಿನ ಹಿಂದೆ ಅನುಮಾನ ಇದೆ ಎಂದು ದೂರು ನೀಡಿದ್ದಾರೆ. ಈಗ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.