ಮನೆ ಕಾನೂನು ಕೊರೊನಾದಿಂದ ಮರಣ: ನಕಲಿ ಕ್ಲೇಮುಗಳ ಕುರಿತು ತನಿಖೆಗೆ ಸುಪ್ರೀಂಕೋರ್ಟ್ ಅನುಮತಿ

ಕೊರೊನಾದಿಂದ ಮರಣ: ನಕಲಿ ಕ್ಲೇಮುಗಳ ಕುರಿತು ತನಿಖೆಗೆ ಸುಪ್ರೀಂಕೋರ್ಟ್ ಅನುಮತಿ

0

ನವದೆಹಲಿ: ಕೋವಿಡ್‌ನಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರಕ್ಕಾಗಿ ನಕಲಿ ಕ್ಲೇಮುಗಳು ಸಲ್ಲಿಕೆಯಾಗಿರುವ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಗುರುವಾರ ಅನುಮತಿ ನೀಡಿದೆ.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.‘ಮಹಾರಾಷ್ಟ್ರ, ಕೇರಳ, ಗುಜರಾತ್‌ ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ ಹಾಗೂ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆಗೂ ಭಾರಿ ವ್ಯತ್ಯಾಸ ಇದೆ.

ಈ ನಾಲ್ಕು ರಾಜ್ಯಗಳಲ್ಲಿ ಸಲ್ಲಿಕೆಯಾಗಿರುವ ಒಟ್ಟು ಕ್ಲೇಮುಗಳ ಪೈಕಿ ಶೇ 5ರಷ್ಟು ಅರ್ಜಿಗಳನ್ನು ಸರ್ಕಾರ ಪರಿಶೀಲಿಸಬಹುದು’ ಎಂದು ನ್ಯಾಯಪೀಠ ಹೇಳಿತು.

ಹಿಂದಿನ ಲೇಖನಟ್ರಸ್ಟಿ ಮಹಿಳೆಯಿಂದ ಕದ್ರಿ ದೇವಾಲಯದ ಹುಂಡಿ ಹಣ ಕಳ್ಳತನ
ಮುಂದಿನ ಲೇಖನಮೃತ ಅಣ್ಣನ ಹೆಸರಿನಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯ ಬಂಧನ