ಬೆಂಗಳೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
Saval TV on YouTube