ಮನೆ ಸುದ್ದಿ ಜಾಲ ಸಂಸಾರ ಬೇಡ ಅಂತ ಯುವತಿ ಜತೆ ಲಿವ್-ಇನ್ ರಿಲೇಷನ್‌ ಶಿಪ್ ನಲ್ಲಿಇದ್ದ ಯುವಕನ ಸಾವು...

ಸಂಸಾರ ಬೇಡ ಅಂತ ಯುವತಿ ಜತೆ ಲಿವ್-ಇನ್ ರಿಲೇಷನ್‌ ಶಿಪ್ ನಲ್ಲಿಇದ್ದ ಯುವಕನ ಸಾವು : ಬೆಂಗಳೂರು

0

ಬೆಂಗಳೂರು ನಗರದ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಫ್ಯಾನಿಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮ*ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ಬಗ್ಗೆ ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

ಮೃತ ಯುವಕ ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ, ಆತ ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇದೇ ವೇಳೆ, ದಾವಣಗೆರೆ ಮೂಲದ ಮಹಿಳೆಯೊಬ್ಬಳೊಂದಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿಬಳಿಕ ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾ ಹತ್ತಿರವಾಗಿದ್ದರು. ಕಳೆದ ಎರಡು ತಿಂಗಳಿನಿಂದ ಅವರು ಲಿವ್-ಇನ್ ಸಂಬಂಧದಲ್ಲಿದ್ದು, ಶ್ರೀಗಂಧನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದರು. ಈ ಕುರಿತು ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ, ಆ ಮಹಿಳೆ ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ತಿಪ್ಪೇಸ್ವಾಮಿ ಜೊತೆ ವಾಸ ಮಾಡುತ್ತಿದ್ದಳು ಎನ್ನಲಾಗಿದೆ.

ಮನೆ ಮಾಲೀಕರಿಗೆ ನಾವಿಬ್ಬರೂ ಗಂಡ-ಹೆಂಡತಿ ಎಂದು ಹೇಳಿದ ಜೋಡಿ ತಿಂಗಳಿಗೆ ಸುಮಾರು 3 ಸಾವಿರ ರೂಪಾಯಿ ಬಾಡಿಗೆ ನೀಡಿ ಜೊತೆಯಾಗಿ ವಾಸಿಸುತ್ತಿದ್ದರು. ಆದರೆ ಕೆಲ ದಿನಗಳಿಂದ ಜೋಡಿಗಳಿಬ್ಬರ ನಡುವೆ ಕಲಹ ಉಂಟಾಗಿತ್ತಂತೆ, “ನನ್ನನ್ನು ನೋಡಿಕೊಳ್ಳಲು ಆಗುವುದಿಲ್ಲ, ನನ್ನನ್ನು ಬಿಟ್ಟುಬಿಡು” ಎಂದು ಮಹಿಳೆ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮನನೊಂದ ತಿಪ್ಪೇಸ್ವಾಮಿ ಆತ್ಮ*ಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ, ತಿಪ್ಪೇಸ್ವಾಮಿ ಸಾವಿಗೆ ಪ್ರಿಯಾಂಕಾ ಎಂಬ ಮಹಿಳೆಯೇ ಕಾರಣ ಎಂದು ಮೃತನ ಕುಟುಂಬಸ್ಥರು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ನಾಪತ್ತೆಯಾಗಿರುವ ಯುವತಿಯ ಹುಡುಕಾಟ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.