ಮನೆ ರಾಜಕೀಯ ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸಿಎಂ ಖಡಕ್ ಸೂಚನೆ

ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸಿಎಂ ಖಡಕ್ ಸೂಚನೆ

0

ಬೆಂಗಳೂರು : ಬಾಣಂತಿಯರ ಸಾವಿನ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು, ‘ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.

Join Our Whatsapp Group

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಬಾಣಂತಿಯರ ಸಾವಿನ ಬಗ್ಗೆ ಗಹನವಾದ ಚರ್ಚೆಯಾಗಿದೆ. ಇದೇ ವೇಳೆ ಸಿದ್ದರಾಮಯ್ಯ, ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಇಲ್ಲ:

ಬಳ್ಳಾರಿ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ. ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಇಲ್ಲ. ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ನೀಡಲಾಗಿದ್ದ ಐವಿ ದ್ರಾವಣದಿಂದಾಗಿ ನಾಲ್ವರು ಬಾಣಂತಿಯರು ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.