ಮನೆ ಅಂತಾರಾಷ್ಟ್ರೀಯ ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನ: ಸೆ.11ರಂದು ದೇಶಾದ್ಯಂತ ಒಂದು ದಿನ ಶೋಕಾಚರಣೆ

ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನ: ಸೆ.11ರಂದು ದೇಶಾದ್ಯಂತ ಒಂದು ದಿನ ಶೋಕಾಚರಣೆ

0

ನವದೆಹಲಿ(Newdelhi): ಬ್ರಿಟನ್‌ನ ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಬ್ರಿಟನ್‌ನ ರಾಣಿ, 96 ವರ್ಷ ವಯಸ್ಸಿನ 2ನೇ ಎಲಿಜಬೆತ್ ಗುರುವಾರ ರಾತ್ರಿ ನಿಧನರಾದರು. ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಅವರದು.

ರಾಣಿಯ ಗೌರವಾರ್ಥ ಬ್ರಿಟನ್‌ನಲ್ಲಿ 10 ದಿನ ರಾಷ್ಟ್ರೀಯ ಶೋಕ ಘೋಷಿಸಿದೆ.  ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ದೀರ್ಘಾವಧಿಯ ಬದುಕು ಮತ್ತು ಆಡಳಿತ ಕುರಿತು ಸಂತಾಪದ ಮಾತುಗಳು ಬರುತ್ತಿವೆ.

ರಾಣಿ 2ನೇ ಎಲಿಜಬೆತ್ ನಿಧನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿಂದಿನ ಲೇಖನಪೋಕ್ಸೊ ಪ್ರಕರಣ: ಪಕ್ಷಕಾರರ ಸಂಧಾನ ಪರಿಗಣಿಸಿ ಆರೋಪಿ ಬಾಲಕನ ವಿರುದ್ಧದ ಪ್ರಕರಣ ವಜಾ ಮಾಡಿದ ಹೈಕೋರ್ಟ್
ಮುಂದಿನ ಲೇಖನಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ