ಮನೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ತೀರ್ಮಾನ: ಮಾಜಿ ಸಿಎಂ ಬಿಎಸ್’ವೈ

ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ತೀರ್ಮಾನ: ಮಾಜಿ ಸಿಎಂ ಬಿಎಸ್’ವೈ

0

ಶಿಕಾರಿಪುರ(Shikaripura): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎರಡು-ಮೂರು ದಿನಗಳಲ್ಲಿ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಶನಿವಾರ ಬಿಜೆಪಿ ಬೂತ್ ವಿಜಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರದಲ್ಲಿ ಗೆಲುವು ಸಾಧಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಕಾಂಗ್ರೆಸ್‌’ನ ಕೆಲವು ನಾಯಕರು ತಾವೇ ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಅದು ಕೇವಲ ತಿರುಕನ ಕನಸು ಹೊರತು ಸಾಧ್ಯವಿಲ್ಲ ಎಂಬುದು ಅವರಿಗೂ ಮನವರಿಕೆಯಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ತಾವು ನಿಂತಿರುವ ನೆಲ ಕುಸಿಯುತ್ತಿದೆ ಎಂಬುದರ ಬಗ್ಗೆ ಅರಿವಿಲ್ಲದೇ ಸಿದ್ದರಾಮಯ್ಯ, ಮುಖ್ಯಮಂತ್ರಿ ಹಾಗೂ ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಹಗುರ ಮಾತುಗಳಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.