ಮನೆ ಸುದ್ದಿ ಜಾಲ ಏಳನೇ ವೇತನ ಆಯೋಗ ರಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಏಳನೇ ವೇತನ ಆಯೋಗ ರಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

0

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಫೋಷಿಸಿದ್ದಾರೆ.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಲಾಗುತ್ತಿದೆ.

ಪ್ರಸಕ್ತ ವರ್ಷದ ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜತೆ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದರು.

ಎರಡು ದಿನಗಳಲ್ಲಿ (ನ.8) ವೇತನ ಆಯೋಗ ರಚಿಸಲಾಗುವುದು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು. 2023ರ ಮಾರ್ಚ್‌ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು.

ಐದು ವರ್ಷ ಪೂರ್ಣಕ್ಕೂ ಮೊದಲೇ ಆಯೋಗ: ಐದು ವರ್ಷಗಳಿಗೆ ಒಮ್ಮೆ ವೇತನ ಆಯೋಗ ರಚನೆ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿ 4 ವರ್ಷ 7 ತಿಂಗಳಿಗೆ ರಚನೆ ಮಾಡಲಾಗುತ್ತಿದೆ. ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ನೌಕರರಿಗೆ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವಾಗಲಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ರಾಜ್ಯ ಎಲ್ಲ ನೌಕರರ ಪರವಾಗಿ ನ.10 ರಂದು ರೇಸ್‌ಕೋರ್ಸ್‌ ರಸ್ತೆಯ ಅವರ ನಿವಾಸದಲ್ಲಿ ಸನ್ಮಾನಿಸಲಾಗುವುದು ಎಂದು ಷಡಾಕ್ಷರಿ ಅವರು ಮಾಹಿತಿ ನೀಡಿದರು.

ಹಿಂದಿನ ಲೇಖನಹೊಸ ವಿನ್ಯಾಸದ ಇಯರ್‌’ಬಡ್ಸ್ ಬಿಡುಗಡೆ ಮಾಡಿದ ನಥಿಂಗ್
ಮುಂದಿನ ಲೇಖನಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ಸತೀಶ್ ಜಾರಕಿಹೊಳಿಯನ್ನು ಪಕ್ಷದಿಂದ ಹೊರ ಹಾಕಲಿ: ಆರಗ ಜ್ಞಾನೇಂದ್ರ