ಮೈಸೂರು(Mysuru): ಮೈಸೂರು ಮಹಾನಗರಪಾಲಿಕೆ ಮೇಯರ್–ಉಪ ಮೇಯರ್ ಚುನಾವಣೆ ನಡೆಸಲು ಕ್ರಮ ವಹಿಸಲಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ನಗರಾಭಿವೃದ್ಧಿ ಇಲಾಖೆಯಿಂದ ಆ.8 ಅಥವಾ 9ರಂದು ಆದೇಶ ಹೊರಬೀಳಬಹುದು. ಕೆಲವೇ ದಿನಗಳಲ್ಲಿ ಮೀಸಲಾತಿ ಪ್ರಕಟಗೊಳ್ಳಲಿದೆ ದಸರಾ ವೇಳೆಗೆ ಹೊಸ ಮೇಯರ್–ಉಪಮೇಯರ್ ಇರಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.