ಮನೆ ಸುದ್ದಿ ಜಾಲ ರಾಜ್ಯದಲ್ಲಿ ಫೆ.15ರವರೆಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಫೆ.15ರವರೆಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

0

ಬೆಂಗಳೂರು: ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆ ಘೋಷಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಶನಿವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಬಗೆಹರಿಯದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಅನ್ನು ಕಾಪಾಡುವ ಹಿತದೃಷ್ಟಿಯಿಂದ ಫೆಬ್ರವರಿ 12 ಮತ್ತು 13ರಂದು ಶನಿವಾರ ಮತ್ತು ಭಾನುವಾರದ ರಜೆಯ ಜೊತೆಗೆ ಫೆಬ್ರವರಿ 14 ಮತ್ತು 15ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನಸಚಿವ ಈಶ್ವರಪ್ಪ ದೇಶದ್ರೋಹಿ:  ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ
ಮುಂದಿನ ಲೇಖನ1200 ವರ್ಷಗಳ ಪುರಾತನ ಬುದ್ದನ ವಿಗ್ರಹ ಇಟಲಿಯಲ್ಲಿ ಪತ್ತೆ