ಮನೆ ಆರೋಗ್ಯ ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಇಳಿಕೆ

ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಇಳಿಕೆ

0

ನವದೆಹಲಿ: ದೇಶದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಗಣನಿಯವಾಗಿ ಇಳಿಮುಖವಾಗುತ್ತಾ ಸಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 14,148 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಸೋಂಕಿಗೆ 302 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,12,924 ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 1,48,359 ಸಕ್ರಿಯ ಪ್ರಕರಣಗಳಿವೆ. ನಿನ್ನೆ 30,009 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,22,19,896 ಕ್ಕೆ ಏರಿಕೆಯಾಗಿದೆ. ಜೊತೆಗೆ ಪಾಸಿಟಿವಿಟಿ ದರ 1.22% ಇದೆ.