ಮನೆ ರಾಜಕೀಯ ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ: ಬಸನಗೌಡ ಪಾಟೀಲ್ ಯತ್ನಾಳ್

ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ: ಬಸನಗೌಡ ಪಾಟೀಲ್ ಯತ್ನಾಳ್

0

ಬೆಳಗಾವಿ: ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು ಎಂದಿದ್ದಾರೆ.

ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನಾಗಿಯೇ ದೆಹಲಿಗೆ ಹೋಗಲ್ಲ, ಕರೆ ಬಂದ ಮೇಲೆ ಹೋಗುತ್ತೇನೆ. ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ‌ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದರು.

ಇಂದು ಸಿದ್ಧಗಂಗಾ ಮಠದಲ್ಲಿ ಗುರುಭವನ ಉದ್ಘಾಟನಾ ಕಾರ್ಯಕ್ರಮ ಮುಗಿದ ಬಳಿಕ ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೆಲ ಅಸಮಾಧಾನಿತ ಶಾಸಕರು ದೆಹಲಿಗೆ ತೆರಳಲಿದ್ದಾರೆ. ರಮೇಶ್ ಜಾರಕಿಹೊಳಿ, ವಿ ಸೋಮಣ್ಣ, ಅರವಿಂದ್ ಬೆಲ್ಲದ್ ಮತ್ತು ಬಸನಗೌಡ ಪಾಟೀಲ್ ಯತ್ನಾಲ್ ಸಹ ದೆಹಲಿಗೆ ತೆರಳಿ ಹೈಕಮಾಂಡ್​ ನಾಯಕರ ಜತೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.