ಮನೆ ಸುದ್ದಿ ಜಾಲ ಒಂದು ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ

ಒಂದು ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ

0

ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲು ಸೂಚಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಬುಧವಾರ  ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ  ಸಿದ್ಧ: ಯದುವೀರ್ ಒಡೆಯರ್
ಮುಂದಿನ ಲೇಖನಮಾಜಿ ಶಾಸಕ ಜಿ.ವಿ.ಮಂಟೂರ ನಿಧನ