ಮನೆ ರಾಷ್ಟ್ರೀಯ ದೆಹಲಿ ವಿಧಾನಸಭೆ ಚುನಾವಣೆ: ಅರವಿಂದ್ ಕೇಜ್ರಿವಾಲ್ ಗೆ ಸೋಲು

ದೆಹಲಿ ವಿಧಾನಸಭೆ ಚುನಾವಣೆ: ಅರವಿಂದ್ ಕೇಜ್ರಿವಾಲ್ ಗೆ ಸೋಲು

0

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು, ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ.

Join Our Whatsapp Group

ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ.

ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದು, ಇದು ಪ್ರಮುಖ ರಾಜಕೀಯ ಏರಿಳಿತವನ್ನು ಸೂಚಿಸುತ್ತದೆ.

2013 ರಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.