ಮನೆ ಕಾನೂನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ​ಗೆ 15 ದಿನ ನ್ಯಾಯಾಂಗ ಬಂಧನ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ​ಗೆ 15 ದಿನ ನ್ಯಾಯಾಂಗ ಬಂಧನ

0

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮತ್ತೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರೊಂದಿಗೆ ಕೇಜ್ರಿವಾಲ್ ಏಪ್ರಿಲ್ 15 ರವರೆಗೆ ಜೈಲಿನಲ್ಲಿರಬೇಕಾಗಿದೆ.

Join Our Whatsapp Group

ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶಿಸಿದ್ದು ಇದರಂತೆ ಸಿಎಂ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪದ ಮೇಲೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿದೆ. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹೆಚ್ಚಿನ ವಿಚಾರಣೆ ಅಗತ್ಯ ಇರುವ ನಿಟ್ಟಿನಲ್ಲಿ ಇಡಿ ಪರ ವಕೀಲರು ವಾದ ಮಾಡಿಸಿದ ನಿಟ್ಟಿನಲ್ಲಿ ಆದೇಶ ಹೊರಡಿಸಿದ ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಏಪ್ರಿಲ್ ೧೫ ರವರೆಗೆ ನ್ಯಾಯಾಂಗ ಬಂಧನವನ್ನು ಮುಂದುವರೆಸುವಂತೆ ಆದೇಶಿಸಿದೆ. ಮತ್ತೊಂದೆಡೆ, ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಏಪ್ರಿಲ್ 3 ರಂದು ದೆಹಲಿ ಹೈಕೋರ್ಟ್‌ ನಲ್ಲಿ ನಡೆಯಲಿದೆ.

ಹಿಂದಿನ ಲೇಖನತಡೆರಹಿತ ವಿದ್ಯುತ್ ಪೂರೈಕೆಗಾಗಿ KPTCL ನಿಂದ ಅತ್ಯಾಧುನಿಕ ತಂತ್ರಜ್ಞಾನ ಬಳಕೆ
ಮುಂದಿನ ಲೇಖನಜಾಮೀನು ಆದೇಶ ಹರಿದು, ನ್ಯಾಯಾಧೀಶರನ್ನು ನಿಂದಿಸಿದ್ದ ಇನ್‌ ಸ್ಪೆಕ್ಟರ್‌ ಗೆ ವಿಚಾರಣೆ ಎದುರಿಸಲು ಆದೇಶಿಸಿದ ಹೈಕೋರ್ಟ್‌