ಮನೆ ಸುದ್ದಿ ಜಾಲ ದೆಹಲಿ ಪೊಲೀಸ್, ಜಾರ್ಖಂಡ್, ಜಂಟಿ ಕಾರ್ಯಾಚರಣೆ – ಇಬ್ಬರು ಉಗ್ರರು ಅರೆಸ್ಟ್

ದೆಹಲಿ ಪೊಲೀಸ್, ಜಾರ್ಖಂಡ್, ಜಂಟಿ ಕಾರ್ಯಾಚರಣೆ – ಇಬ್ಬರು ಉಗ್ರರು ಅರೆಸ್ಟ್

0

ನವದೆಹಲಿ : ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ.

ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂದು ಗುರುತಿಸಲಾದ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ಐಸಿಸ್-ಸಂಬಂಧಿತ ಮಾಡ್ಯೂಲ್‌ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕವು ಆಶರ್ ಡ್ಯಾನಿಶ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿತ್ತು.

ಏಕಕಾಲದಲ್ಲಿ ನಡೆಸಿದ ಸಂಘಟಿತ ದಾಳಿಯಲ್ಲಿ ಅಫ್ತಾಬ್ ಎಂಬ ಮತ್ತೊಬ್ಬ ಶಂಕಿತ ಐಸಿಸ್ ಉಗ್ರನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಬಂಧಿತರು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದರು. ಅಲ್ಲದೇ ಭಾರತದಲ್ಲಿ ಭ ಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.