ನವದೆಹಲಿ (New Delhi)-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,367 ಹೊಸ ಕೋವಿಡ್ (Covid) ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇದರಿಂದ ಸೋಂಕಿತರ ಸಂಖ್ಯೆ 18,78,458 ಆಗಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 26,170 ಕ್ಕೆ ತಲುಪಿದೆ.
ಈ ಹೊಸ ಪ್ರಕರಣಗಳು ನಿನ್ನೆಯ ಸಂಖ್ಯೆ(1,204)ಗಿಂತ ಶೇ.13 ರಷ್ಟು ಹೆಚ್ಚಾಗಿದೆ. ದೆಹಲಿ ಆರೋಗ್ಯ ಇಲಾಖೆ ಹಂಚಿಕೊಂಡ ಮಾಹಿತಿಯ ಪ್ರಕಾರ, ರಾಜಧಾನಿಯಲ್ಲಿ ಸತತ ಆರನೇ ದಿನ 1,000ಕ್ಕೂ ಹೆಚ್ಚು ಹೊಸ ದೈನಂದಿನ ಪ್ರಕರಣಗಳು ವರದಿಯಾಗಿದ್ದು, ಕೋವಿಡ್ ಪಾಸಿಟಿವಿಟಿ ದರ ಶೇಕಡಾ 4.50 ರಷ್ಟಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವರ್ಚುವಲ್ ಸಭೆಯಲ್ಲಿ ದೇಶದಲ್ಲಿ ಹಿಂದಿನ ಕೋವಿಡ್ ಅಲೆಗಳ ಸಮಯದಲ್ಲಿ ಮಾಡಿದ ರೀತಿ ‘ಪರೀಕ್ಷೆ, ಟ್ರ್ಯಾಕ್ ಮತ್ತು ಚಿಕಿತ್ಸೆ ಅನುಷ್ಠಾನಕ್ಕೆ ಒತ್ತು ನೀಡಿದರು.