ಮಂಡ್ಯ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಜಯಕರ್ನಾಟಕ ಸಂಘಟನೆ ತೀವ್ರ ಖಂಡಿಸಿ, ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ನೇತೃತ್ವದಲ್ಲಿ ಗೃಹ ಸಚಿವರಿಗೆ ಡಿಸಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.
ಕೃತ್ಯ ಎಸಗಿದವರ ವಿರುದ್ದ ಕಾನೂನು ಕ್ರಮ ಹಾಗೂ ಕಠಿಣ ಶಿಕ್ಷೆ ನೀಡಬೇಕು. ರಿಕ್ಕಿ ರೈ ಗೆ ಸರ್ಕಾರದಿಂದ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಭಯಬೀತಿಯಿಂದ ಬದುಕವ ಪರಿಸ್ಥಿತಿ ರಾಜ್ಯದ ಜನರಿಗೆ ಎದುರಾಗಿದೆ. ತಕ್ಷಣವೇ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇದೇ ವೇಳೆ ರವೀಂದ್ರ, ಬಸವರಾಜ, ಅಭಿ, ಪುಟ್ಟಸ್ವಾಮಿ, ಅಕ್ಷಯ್ ಭಾಗವಹಿಸಿದ್ದರು.














