ಮನೆ ಅಪರಾಧ ಸ್ವತ್ತು ನೀಡಲು ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಲಾಕ್ ಆದ‌ ಬಿಲ್ ಕಲೆಕ್ಟರ್..!

ಸ್ವತ್ತು ನೀಡಲು ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಲಾಕ್ ಆದ‌ ಬಿಲ್ ಕಲೆಕ್ಟರ್..!

0

ಹಾಸನ : ಹಾಸನ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರ ವಿರುದ್ಧ ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್‌ನನ್ನು ಬಲೆಗೆ ಬೀಳಿಸಿದ್ದಾರೆ.

ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಆಗಿರುವ ಹರೀಶ್ ಬಂಧಿತ ಆರೋಪಿ. ಇ-ಸ್ವತ್ತು ನೀಡಿಕೆಗೆ ಸಂಬಂಧಿಸಿದಂತೆ ಸೋಮಶೇಖರ್ ಎಂಬುವವರಿಂದ 48 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಹರೀಶ್‌ನನ್ನು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ನಂದಿನಿ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಪ್ರಕರಣ ಸಂಬಂಧ ಮುಂದಿನ ತನಿಖೆ ಕೈಗೊಳ್ಳಲಾಗಿದೆ.]