ಶ್ರೀನಗರ(Srinagara): ಕಾಂಗ್ರೆಸ್‌ನಿಂದ ನಿರ್ಗಮಿಸಿ ಸುಮಾರು ಒಂದು ತಿಂಗಳ ನಂತರ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.
ತಮ್ಮ ಹೊಸ ಪಕ್ಷದ ಹೆಸರು ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ಎಂದು ತಿಳಿಸಿದ್ದಾರೆ.
ನಮ್ಮ ಪಕ್ಷಕ್ಕೆ “ವಯಸ್ಸಿನ ಮಿತಿಯಿಲ್ಲ” ಎಂದು ಒತ್ತಿ ಹೇಳಿದ ಆಜಾದ್ ಯುವಕರು ಮತ್ತು ಹಿರಿಯರು ಪಕ್ಷದಲ್ಲಿ ಸಹಬಾಳ್ವೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಆಜಾದ್ ಅವರು ಆಗಸ್ಟ್ 26 ರಂದು ಕಾಂಗ್ರೆಸ್ ಜೊತೆಗಿನ ದಶಕಗಳ ಕಾಲದ ಒಡನಾಟವನ್ನು ಕೊನೆಗೊಳಿಸಿ ರಾಜೀನಾಮೆ ನೀಡಿದ್ದರು.
ನನ್ನ ಹೊಸ ಪಕ್ಷಕ್ಕಾಗಿ ಸುಮಾರು 1,500 ಹೆಸರುಗಳನ್ನು ಉರ್ದು, ಸಂಸ್ಕೃತದಲ್ಲಿ ನಮಗೆ ಕಳುಹಿಸಲಾಗಿದೆ. ಹಿಂದಿ ಮತ್ತು ಉರ್ದು ಮಿಶ್ರಿತ ಪದ’ಹಿಂದೂಸ್ತಾನಿ’. ಪಕ್ಷದ ಹೆಸರು ಪ್ರಜಾಸತ್ತಾತ್ಮಕ, ಶಾಂತಿಯುತ ಮತ್ತು ಸ್ವತಂತ್ರವಾಗಿರಬೇಕು ಎಂದು ನಾವು ಬಯಸಿದ್ದೇವೆ ಎಂದು ಆಜಾದ್ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Saval TV on YouTube