ಮನೆ ರಾಜ್ಯ ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

0

ಮೈಸೂರು: ಒಂದೊಂದು ಸರಿ ಒಳ್ಳೆಯವರು ರಾಜ್ಯ ಆಳಿದರೆ, ಮತ್ತೊಮ್ಮೆ ರಾಕ್ಷಸರು ರಾಜ್ಯ ಅಳುತ್ತಾರೆ. ಈಗ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ. ಶಿವಮೊಗ್ಗ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ ಎಂದು ರಾಜ್ಯ ಸರಕಾರದ ವಿರುದ್ದ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾತನಾಡಿದ ಅವರು, ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ. ಚುಕ್ಕಾಣಿ ಹಿಡಿದವರು ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದರು.

ಪಿಎಫ್ ಐ, ಕೆಎಫ್ ಡಿ ಮೇಲಿನ ಕೇಸ್ ವಾಪಾಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಸಿದ್ದರಾಮಯ್ಯ ಇದಕ್ಕೆ ಕಾರಣ. ಅವರು ಬಿಗಿ ಆಗಿ ಇದ್ದರೆ ಈ ರೀತಿ ಆಗುತ್ತಿರಲಿಲ್ಲ. ಕೆಎಫ್ ಡಿ ,ಪಿಎಫ್ ಐ ಸಂಘಟನೆಗಳು ಎದ್ದು ನಿಂತಿವೆ. ಸರಕಾರಕ್ಕೆ ಲಂಗು ಲಾಗಾಮು ಇಲ್ಲ. ಮುಸ್ಲಿಂ ಪುಂಡರು ಎಸ್ಪಿ ಮೇಲೆ ಕಲ್ಲು ತೂರುತ್ತಾರೆ. ಕೋಲಾರದಲ್ಲಿ ದಲಿತ ಸಂಸದರ ಮೇಲೆ ಎಸ್ಪಿ ಹಲ್ಲೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಾವೇರಿ ನೀರು ವಿಚಾರವನ್ನು ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಒಬ್ಬರಾದರೂ ಮಾತಾಡಿದ್ದಾರಾ? ಈ ಸರಕಾರಕ್ಕೆ ಬೆನ್ನು ಮೂಳೆಯೆ ಇಲ್ಲ. ಸ್ಟಾಲಿನ್ ಬಗ್ಗೆ ಒಂದು ಹೇಳಿಕೆ ಕೊಡಲಿ ನೋಡೋಣಾ? ಸಿದ್ದರಾಮಯ್ಯ ಎದುರಾಳಿಗಳ ಮೇಲೆ ಉಡಾಫೆಯಿಂದ ಕೂಗಾಡುತ್ತಾರೆ ಸ್ಟಾಲಿನ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ. ಸ್ಟಾಲಿನ್ ವಿರುದ್ಧ ಮಾತಾಡಲು ಕಾಂಗ್ರೆಸ್ ನ ಎಲ್ಲಾ ನಾಯಕರಿಗೆ ತೊಡೆ ನಡುಗುತ್ತದೆ ಎಂದರು.