ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
Saval TV on YouTube