ಮನೆ ಆರೋಗ್ಯ ಸರ್ಕಾರದಿಂದ ಡೆಂಗ್ಯೂ ಟೆಸ್ಟಿಂಗ್ ದರ ನಿಗದಿ

ಸರ್ಕಾರದಿಂದ ಡೆಂಗ್ಯೂ ಟೆಸ್ಟಿಂಗ್ ದರ ನಿಗದಿ

0

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರ ಉಲ್ಬಣಗೊಂಡಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

Join Our Whatsapp Group

ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್‌ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್‌ಗಳಿಗೆ ಒಟ್ಟು ೬೦೦ ರೂ. ದರ ನಿಗದಿ ಮಾಡಿ ಆದೇಶಿಸಿದೆ.NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ ೩೦೦ ರೂ ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು ೬೦೦ ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.
ಡೆಂಗ್ಯೂ ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ.

ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗ್ಯೂ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಡಿನಲ್ಲಿ ಮಹತ್ವದ ಸಭೆ ಕರೆದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.

ಹಿಂದಿನ ಲೇಖನಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ: ಬಿಬಿಎಂಪಿ ಸ್ಪಷ್ಟನೆ
ಮುಂದಿನ ಲೇಖನಸ್ಟಿಂಗ್ ಆಪರೇಷನ್ ನೆಪದಲ್ಲಿ ಸುಲಿಗೆ : ಖಾಸಗಿ ಚಾನಲ್‌ ನ ಸಿಬ್ಬಂದಿ ಅರೆಸ್ಟ್‌