ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ತೆರಳಲು ಮುಂಗಡ ಬುಕ್ಕಿಂಗ್ ಮಾಡಿದ್ದರೂ ಚಾರಣಕ್ಕೆ ಅವಕಾಶ ನೀಡದ ಕಾರಣಕ್ಕಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರ ವಾಗ್ವಾದ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಚಾರಣಕ್ಕೆ ದಿನಕ್ಕೆ 300 ಮಂದಿಗಷ್ಟೆ ಅರಣ್ಯ ಇಲಾಖೆ ಅವಕಾಶ ನೀಡಿದೆ. ಈ ನಿಯಮದಿಂದಾಗಿ ನೇತ್ರಾವತಿ ಪೀಕ್ ಗೆ ಆಗಮಿಸಿದ್ದ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ.