ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯ, ಕಡಿಮೆ ಗೋಚರತೆ ಕಾರಣದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ.
ಇತ್ತ ರೈಲು ಸಂಚಾರದಲ್ಲಿಯೂ ಸಮಯ ಬದಲಾವಣೆಯಾಗಿದ್ದು, ಕೆಲವು ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಕನಿಷ್ಠ ತಾಪಮಾನ 10.5 ಡಿಗ್ರಿ ಸೆಲ್ಸಿಯಸ್ ಇದ್ದು, ಗರಿಷ್ಠ ತಾಪಮಾನವು 21.86 ಡಿಗ್ರಿ ಸೆಲ್ಸಿಯಸ್‌ಗೆ ಏರುವ ನಿರೀಕ್ಷೆಯಿದೆ ಎಂದು ದೆಹಲಿ ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿಯ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ. ಇಂದು ಬೆಳಿಗ್ಗೆ 7 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 194ರಷ್ಟು ದಾಖಲಾಗಿದೆ.
Saval TV on YouTube