ಮನೆ ಸುದ್ದಿ ಜಾಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಪ್ರಕಟ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿ ಪ್ರಕಟ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ ತೆಲ್ತುಂಬಡೆ, ಡಾ. ಎನ್.ಜಿ.ಮಹದೇವಪ್ಪ ಆಯ್ಕೆ

0

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಘೋಷಣೆಯಾಗಿದ್ದು, 2022–23 ಹಾಗೂ 2023–24ನೇ ಸಾಲಿಗೆ ಕ್ರಮವಾಗಿ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ ತೆಲ್ತುಂಬಡೆ ಹಾಗೂ ಡಾ. ಎನ್.ಜಿ.ಮಹದೇವಪ್ಪ ಅವರು ಆಯ್ಕೆಯಾಗಿದ್ದಾರೆ.

ಬಸವ, ಮಹಾವೀರ, ಚೌಡಯ್ಯ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳ ಪ್ರದಾನ ಜ. 31ರಂದು ನಡೆಯಲಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧೀ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿಗೆ ಕೊಳಲು ವಾದಕ ನಿತ್ಯಾನಂದ ಹಳದಿಪುರ ಹಾಗೂ ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಅವರು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕಿ ಸಂಗೀತದ ಮೈಸೂರಿನ ಡಾ. ನಾಗಮಣಿ ಶ್ರೀನಾಥ್ ಭಾಜನರಾಗಿದ್ದಾರೆ.

ಈ ಪ್ರಶಸ್ತಿಗಳು ತಲಾ ₹10 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಈ ಪ್ರಶಸ್ತಿಗಳ ಆಯ್ಕೆಗೆ ರಚಿಸಲಾದ ಸಮಿತಿಗೆ ಡಾ. ಗೊ.ರು.ಚನ್ನಬಸಪ್ಪ ಅಧ್ಯಕ್ಷರಾಗಿದ್ದರು.