ಮನೆ ಉದ್ಯೋಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹೊರಗುತ್ತಿಗೆ ಆಧಾರದ ಮೇಲೆ ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಆರಂಭದಲ್ಲಿ 11 ತಿಂಗಳು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಕಾರ್ಯದಕ್ಷತೆ ಆಧಾರದಲ್ಲಿ ಮುಂದುವರಿಸುವ ಅವಕಾಶ ಇರುತ್ತದೆ.
ಸಮಾಜ ವಿಜ್ಞಾನ / ಸಮಾಜ ಕಾರ್ಯ / ಗ್ರಾಮೀಣ ನಿರ್ವಹಣೆ / ಸಂಖ್ಯಾಶಾಸ್ತ್ರ ಇವುಗಳಲ್ಲಿ ಯಾವುದಾದರೊಂದು ವಿಷಯದಲ್ಲಿ ಪದವಿ ಪಡೆದಿರಬೇಕು.
ಸೇವಾ ಅನುಭವ ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು, ಡಾಟಾ ಎಂಟ್ರಿ, ಎಂಎಸ್ ಆಫೀಸ್ ಬಳಕೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು, ಸ್ಥಳೀಯ ಭಾಷೆ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು. ಗೌರವಧನ ರೂ. 25,000 ಪ್ರತಿ ತಿಂಗಳು.
ಈ ಹಿಂದೆ ಉತ್ತಮವಾಗಿ ಕೆಲಸ ನಿರ್ವಹಿಸಿರುವ ಬಗ್ಗೆ ದಾಖಲೆ ಹೊಂದಿರುವ ಹಾಗೂ ಕನಿಷ್ಠ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಉತ್ತಮವಾಗಿ ಪತ್ರ ವ್ಯವಹಾರ ನಿರ್ವಹಿಸಬಲ್ಲ ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಓದುವ, ಬರೆಯುವ, ಮಾತನಾಡುವ ಪರಿಣತಿ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಸದರಿ ನೇಮಕಾತಿಯು 11 ತಿಂಗಳ ಅವಧಿಯದಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ಕರ್ತವ್ಯ ಅವಧಿ ವಿಸ್ತರಣೆ ಸಾಧ್ಯತೆ ಇರುತ್ತದೆ. ಅರ್ಜಿ ಜತೆಗೆ ಕಾರ್ಯಾನುಭವ ದಾಖಲೆಗಳನ್ನು ಲಗತ್ತಿಸಬೇಕು.
ಅಭ್ಯರ್ಥಿಗಳು ಜುಲೈ 15 ರೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್‌ಸೈಟ್‌ https://wcd.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ಅಭ್ಯರ್ಥಿಗಳು ಸ್ವ ವಿವರಗಳುಳ್ಳ ರೆಸ್ಯೂಮ್ ಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ || ಬಿ ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಕಳುಹಿಸಬಹುದು.