ಹಿರಿಯ ಶ್ರೇಣಿಯ ಅಧಿಕಾರಿಗಳ ಮನೆಗಳಲ್ಲಿ ಸಮವಸ್ತ್ರಧಾರಿ ಪೊಲೀಸ್ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ತೊಡಗಿಸಿಕೊಳ್ಳುವ ಅಭ್ಯಾಸ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳ ಮೋಕ್ಷ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.
[ಯು ಮಾಣಿಕ್ಯವೇಲ್ ಮತ್ತು ತಮಿಳುನಾಡು ಸರ್ಕಾರದ ನಡುವಣ ಪ್ರಕರಣ].
ಇದೊಂದು ‘ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆʼಯಾಗಿದ್ದು, ಕೂಡಲೇ ತೊಲಗಿಸಬೇಕು ಎಂದ ನ್ಯಾ. ಎಸ್ ಎಂ ಸುಬ್ರಮಣ್ಯಂ ಅವರಿದ್ದ ಏಕಸದಸ್ಯ ಪೀಠ ತಿಳಿಸಿತು.
“ಭಾರತದ ಜನತೆಯಾದ ನಾವು ಸ್ವಾತಂತ್ರ್ಯದ 75ನೇ ವರ್ಷಾಚರಣೆಯಲ್ಲಿ ತೊಡಗಿದ್ದೇವೆ. ತಮಿಳುನಾಡು ರಾಜ್ಯದ ಉನತ ಪೊಲೀಸ್ ಅಧಿಕಾರಿಗಳ ಮನೆಗಳಲ್ಲಿ ಅಧೀನ ಸಿಬ್ಬಂದಿಯಲ್ಲಿ ಕೀಳು ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆ ಇನ್ನೂ ಚಾಲ್ತಿಯಲ್ಲಿದೆ ಎಂದು ಉಲ್ಲೇಖಿಸುವುದು ನೋವಿನ ಸಂಗತಿಯಾಗಿದೆ. ಇದು ನಮ್ಮ ಮಹಾನ್ ರಾಷ್ಟ್ರದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳಮೋಕ್ಷವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ದೇಶ ಶಕ್ತಿಶಾಲಿ ಪ್ರಜಾಪ್ರಭುತ್ವದತ್ತ ಹೆಜ್ಜೆ ಇರಿಸುತ್ತಿದ್ದರೂ ತಮಿಳುನಾಡಿನ ಹಿರಿಯ ಪೊಲೀಸ್ ಅಧಿಕಾರಿಗಳು ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆಯನ್ನು ಪಾಲಿಸುತ್ತಿದ್ದಾರೆ ಎಂದು ಏಕ ಸದಸ್ಯ ಪೀಠ ತಿಳಿಸಿತು.
“ಇದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ. ತೆರಿಗೆ ಪಾವತಿದಾರರ ಹಣ ಖರ್ಚು ಮಾಡಿ ತರಬೇತಿ ಕೊಡಿಸಿದ ಸಮವಸ್ತ್ರಧಾರಿ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಗಳ ಮನೆಗಳಲ್ಲಿ ಕೀಳು ಕೆಲಸಗಳನ್ನು ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಹಿರಿಯ ಅಧಿಕಾರಿಗಳ ಮನಸ್ಥಿತಿಯನ್ನು ಪ್ರಶ್ನಿಸುವ ಹಕ್ಕಿದೆ” ಎಂದು ನ್ಯಾಯಾಲಯ ಹೇಳಿತು.
ಸಾರ್ವಜನಿಕ ಸೇವಕ ಎಂಬುದನ್ನು ಜನರ ಸೇವೆ ಸಲ್ಲಿಸಲೆಂದು ಮಾತ್ರ ಸಂವಿಧಾನ ಕಡ್ಡಾಯಗೊಳಿಸುತ್ತದೆ ಎಂಬ ಅಂಶವನ್ನು ನ್ಯಾಯಾಲಯ ಹೇಳಿತು.
” ನಮ್ಮ ಮಹಾನ್ ರಾಷ್ಟ್ರದ ಪ್ರತಿಯೊಬ್ಬ ನಾಗರಿಕ “ರಾಣಿ ಅಥವಾ ರಾಜ” ಎಂದು ಭಾರತೀಯ ಸಂವಿಧಾನದ ಸ್ಫೂರ್ತಿ, ತತ್ವ ಮತ್ತು ನೀತಿ ಘೋಷಿಸುತ್ತದೆ. ಮೊಘಲ್ ಚಕ್ರವರ್ತಿಗಳ ಜಗತ್ತಿನಲ್ಲಿ ಯಾವುದೇ ಸಾರ್ವಜನಿಕ ಸೇವಕ ಇದ್ದಾರೆ ಎಂದು ಊಹಿಸಿಕೊಳ್ಳಲು ಅಥವಾ ಹಾಗೆ ಬದುಕಿರಲು ಸಾಧ್ಯವಿಲ್ಲ. ಸಂವಿಧಾನದ ಪ್ರಕಾರ ಅಂತಹ ಎಲ್ಲಾ ಅಧಿಕಾರಿಗಳು ಸಂವಿಧಾನದಲ್ಲಿ ನಿಗದಿಪಡಿಸಿದ ತತ್ವಗಳಿಗೆ ಅನುಗುಣವಾಗಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಜಾರಿಗೊಳಿಸಿದ ಕಾನೂನು ಮತ್ತು ನಿಯಮಗಳ ಪ್ರಕಾರ ಸಾರ್ವಜನಿಕ ಸೇವಕರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದಾರೆ. ಅಶಿಸ್ತಿನ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸಮವಸ್ತ್ರಧಾರಿಗಳಲ್ಲಿ ಅದರಲ್ಲೂ ತಮ್ಮ ಅಧೀನ ಅಧಿಕಾರಿಗಳಲ್ಲಿ ಶಿಸ್ತು ಮೂಡಿಸುವ ನೈತಿಕತೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿತು.
ರಾಜ್ಯ ಸರ್ಕಾರ 1979ರಲ್ಲಿಯೇ “ಆರ್ಡರ್ಲಿ” ವ್ಯವಸ್ಥೆ ರದ್ದುಗೊಳಿಸಿದ್ದರೂ, ತಮಿಳುನಾಡು ರಾಜ್ಯದಲ್ಲಿ ಈ ಪದ್ಧತಿಯನ್ನು ಮುಂದುವರೆಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಹೀಗಾಗಿ ಹಿರಿಯ ಅಧಿಕಾರಿಗಳ ಮನೆಗೆಲಸಕ್ಕೆ ಅಧೀನ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳುವ ಪದ್ಧತಿಯನ್ನು ತಕ್ಷಣವೇ ರದ್ದುಗೊಳಿಸುವಂತೆ ತಮಿಳುನಾಡು ಡಿಜಿಪಿಗೆ ಪೀಠ ಆದೇಶಿಸಿತು. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18ಕ್ಕೆ ನಿಗದಿಯಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.