ಮನೆ ಕಾನೂನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್!

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್!

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರು ಮತ್ತು ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ ಜಾರಿಯಾಗಿದೆ.

ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಜಾರಿಮಾಡಿರುವ ನೋಟಿಸ್‌ನಲ್ಲಿ, ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 58ರಡಿಯಲ್ಲಿ ಕ್ರಮ ಕೈಗೊಂಡಿರುವುದು ಸ್ಪಷ್ಟವಾಗಿದೆ. ಜೂನ್ 6ರಂದು ವಿಚಾರಣೆಗೆ ಹಾಜರಾಗಬೇಕೆಂಬ ಸೂಚನೆಯನ್ನೂ ನೋಟಿಸ್‌ ಒಳಗೊಂಡಿದೆ.

ನೋಟಿಸ್‌ನಲ್ಲಿ, ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಬಗ್ಗೆ ಉಲ್ಲೇಖಿಸಲಾಗಿದೆ. ಈ ವಿಚಾರದಲ್ಲಿ ಅವರು ಸ್ವತಃ ಅಥವಾ ತಮ್ಮ ನ್ಯಾಯವಾದಿಯ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ವಾದವನ್ನು ಮಂಡಿಸಬೇಕೆಂದು ಸೂಚಿಸಲಾಗಿದೆ.

ನೋಟಿಸ್‌ನಲ್ಲಿ ಸ್ಪಷ್ಟವಾಗಿ ಹೇಳಿರುವಂತೆ, ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದಿದ್ದರೆ, ಲಭ್ಯವಿರುವ ದಾಖಲೆಗಳ ಆಧಾರದಲ್ಲಿ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು.