ಮನೆ ಕಾನೂನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೊಕಾಯುಕ್ತ...

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೊಕಾಯುಕ್ತ ಬಲೆಗೆ

0

ಮಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಅವರು, 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತದ ಬಲೆಗೆ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ, ಗಣೇಶ್ ಶೆಟ್ಟಿ ಎಂಬುವವರು ತಮ್ಮ ನಿವೇಶನವನ್ನು ನೆಲಸಮಗೊಳಿಸಲು ಲ್ಯಾಟರೈಟ್ ಕಲ್ಲು ತೆಗೆಯಲು ಅನುಮತಿ ಪಡೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಉಪ ನಿರ್ದೇಶಕಿ ಕೃಷ್ಣವೇಣಿ ಅವರು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಲಂಚದ ಬೇಡಿಕೆಯಿಂದ ತೀವ್ರ ಅಸಮಾಧಾನಗೊಂಡ ಗಣೇಶ್ ಶೆಟ್ಟಿ ಅವರು, ಕೂಡಲೇ ಮಂಗಳೂರು ಲೋಕಾಯುಕ್ತ ಪೊಲೀಸ್ ಇಲಾಖೆ ಬಳಿ ದೂರು ಸಲ್ಲಿಸಿದರು. ದೂರು ಸ್ವೀಕರಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಿ ಇಂದು ದಾಳಿ ನಡೆಸಿದರು.

ಅವರು ಲಂಚದ ಹಣ ಸ್ವೀಕರಿಸುತ್ತಿದ್ದ ಸಮಯದಲ್ಲಿ, ಲೋಕಾಯುಕ್ತ ಎಸ್.ಪಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕೃಷ್ಣವೇಣಿಯವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲು ಯಶಸ್ವಿಯಾಯಿತು. ಈ ವೇಳೆ 5 ಲಕ್ಷ ರೂ. ನಗದು ಸಹಿತ ಸಾಕ್ಷ್ಯ ಸಂಗ್ರಹಿಸಲಾಗಿದೆ.