ಮೈಸೂರು: ಉಪ ಲೋಕಾಯುಕ್ತ ಫಣೀಂದ್ರ ಅವರು ಆರೋಗ್ಯ ಇಲಾಖೆಯ ಐವರು ಅಧಿಕಾರಿ, ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಾಲಮಂದಿರದ ಏಳು ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
ಡಿಎಚ್ ಒ ಡಾ.ಕೆ.ಹೆಚ್. ಪ್ರಸಾದ್, ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ನಂಜುಂಡಸ್ವಾಮಿ, ಸ್ಥಾನಿಕ ವೈದ್ಯಾಧಿಕಾರಿ ಡಾ.ರಾಜೇಶ್ ಕುಮಾರ್, ಚೆಲುವಾಂಬ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಿವರಾಮ್ ಕೃಷ್ಣ ಅವರ ವಿರುದ್ಧ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಅಂತೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ್, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಯೋಗೇಶ್, ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಶಾರದಾದೇವಿ, ರಕ್ಷಣಾ ಅಧಿಕಾರಿ ಲತಾ, ಜಯಂತಿ, ಬಾಲಕರ ಬಾಲಮಂದಿರದ ಅಧೀಕ್ಷಕ ಗುರುಮೂರ್ತಿ ಮತ್ತು ಮೋಹನ್ ಅವರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ ಲೋಕಾಯುಕ್ತರು ಇತ್ತೀಚಿಗೆ ಮೈಸೂರು ಭೇಟಿ ಕಾಲಕ್ಕೆ ಈ ಕರ್ತವ್ಯ ಲೋಪ ಕಂಡುಬಂದಿತ್ತು.