ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್ ಡ್ರೈಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎನ್ನಲಾಗಿರುವ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರ ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ.
ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳು ಪೊಲೀಸರನ್ನು ಕಂಡು ಅವರ ಕಣ್ಣು ತಪ್ಪಿಸಿ ಎಲ್ಆರ್ ಶಿವರಾಮೇಗೌಡ ಮನೆ ಮುಂದೆ 5-6 ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್ಆರ್ ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದಾರೆ.